Bridge collapse – ತೂಗು ಸೇತುವೆ ದುರಂತ – 132 ಜನ ಸಾವು
ಗುಜರಾತ್ ನ ತೂಗು ಸೇತುವೆ ದುರಂತ
ಸದ್ಯ 177 ಕ್ಕೂ ಹೆಚ್ಚು ಮಂದಿಯ ರಕ್ಷಣೆ
ಬೋಟ್ ಗಳ ಸಹಾಯದಿಂದ ರಕ್ಷಣಾ ಕಾರ್ಯ
ಬ್ರಿಟಿಷರು ನಿರ್ಮಿಸಿದ್ದ ತೂಗು ಸೇತುವೆ
ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 60ಕ್ಕೇರಿಕೆ
ಗಾಂಧೀನಗರ : ತೂಗು ಸೇತುವೆ ಕುಸಿತದಿಂದಾಗಿ 132 ಮಂದಿ ಮೃತಪಟ್ಟು ನೂರಾರು ಮಂದಿ ಅಪಾಯದಲ್ಲಿ ಸಿಲುಕಿದ್ದು, ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೆ ಏರಿಕೆಯಾಗುತ್ತಿದೆ.
ಸೇತುವೆ ಕುಸಿಯುವ ವೇಳೆ 500 ಕ್ಕೂ ಹೆಚ್ಚು ಮಂದಿ ಇದ್ದರು. ಈ ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಎನ್ ಡಿಆರ್ ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ..
ಸದ್ಯ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.
140 ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆಯನ್ನು ಕೇಬಲ್ ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿದ್ದರು.
ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಮೃತರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಲಿದೆ.