ದುಬೈ: ಮಹಿಳಾ ಟಿ20 ವಿಶ್ವಕಪ್ ನಲ್ಲಿ ಇಂದು ಭಾರತೀಯ ಮಹಿಳಾ ತಂಡ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ.
ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಭಾರತ ತಂಡ ತಾನಾಡಿದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ಹೀಗಾಗಿ ಈ ಪಂದ್ಯ ನಿರ್ಣಾಯಕವಾಗಿದೆ.
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನವನ್ನು ಎದುರಿಸಲಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡದ ವನಿತೆಯರು ಸೋಲನುಭವಿಸಿದ್ದರು. ನಂತರ ಶ್ರೀಲಂಕಾ ವಿರುದ್ಧ ಜಯ ಗಳಿಸಿತ್ತು. ಕಿವಿಸ್ ವಿರುದ್ಧ ಭಾರತ ಬೌಲಿಂಗ್ ಹಾಗೂ ಬ್ಯಾಟಿಂಗ್ ವೈಫಲ್ಯದಿಂದ 58 ರನ್ ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಕಳಪೆ ನೆಟ್ ರನ್ ರೇಟ್ ಹೊಂದಿದ್ದು, 5 ತಂಡಗಳಿರುವ ‘ಎ’ ಗುಂಪಿನಲ್ಲಿ ಕೊನೆಯ ಸ್ಥಾನದಲ್ಲಿದೆ.
ಪಾಕ್ ವಿರುದ್ಧದ ಪಂದ್ಯ ಸೇರಿದಂತೆ ಒಟ್ಟು 3 ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ. ಈ ಎಲ್ಲಾ ಪಂದ್ಯಗಳಲ್ಲೂ ಗೆಲ್ಲುವ ಅನಿರ್ವಾಯತೆ ಇದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಒತ್ತಡದಲ್ಲಿ ಬಾರ ತಂಡ ಇದೆ.