ಬಾಲಿವುಡ್ ನ ನಟಿ ಮಲೈಕಾ ಅರೋರಾ (Malaika Arora) ಅವರ ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ (Anil Arora) ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್ ನಿಂದ ಹಾರಿ ಆತ್ಯಹತ್ಯೆ (Suicide) ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ತಮ್ಮ ಮನೆಯ 7ನೇ ಮಹಡಿಯಿಂದ ಬಿದ್ದು ಮಲೈಕಾ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಮಾಜಿ ಪತಿ ಅರ್ಬಾಜ್ ಖಾನ್ (Arbaaz Khan) ಕೂಡ ಭೇಟಿ ನೀಡಿದ್ದಾರೆ.
ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ನಿಕರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.