ಕೊರೊನಾ ಲಸಿಕೆ ಪಡೆದ ಸ್ಯಾಂಡಲ್ ನಟಿ ಮಾಲಾಶ್ರೀ
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಮಾಲಾಶ್ರೀ ಅವರು ಇತ್ತೀಚೆಗಷ್ಟೇ ಪತಿಯನ್ನ ಕಳೆದುಕೊಂಡಿದ್ದಾರೆ.. ಸ್ಯಾಂಡಲ್ ವುಡ್ ನಿರ್ಮಾಪಕ ರಾಮು ಅವರು ಕೋವಿಡ್ ನಿಂದ ಇಹಲೋಕ ತ್ಯಜಿಸಿದ್ದು, ಈದುಃಖದಿಂದ ಇನ್ನೂ ಅವರ ಕುಟುಂಬ ಹೊರಬಂದಿಲ್ಲ..
ಇದೀಗ ಮಾಲಾಶ್ರೀ ಅವರು ಕೊರೊನಾ ಲಸಿಕೆ ಪಡೆದಿದ್ದಾರೆ. ಕೋವಿಡ್ ಮೊದಲ ಡೋಸ್ ಪಡೆದ ಮಾಲಾಶ್ರೀ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಅದಕ್ಕೆ “ವ್ಯಾಕ್ಸಿನೇಟೆಡ್” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದಕ್ಕೆ ಅಭಿಮಾನಿಗಳು ಪ್ರತಿಕ್ರಿಯೆಗಳನ್ನ ನೀಡುತ್ತಿದ್ದು, ನೀವು ಎಷ್ಟು ಅತ್ತಿದ್ದೀರಿ ಎನ್ನುವುದು ನಿಮ್ಮ ಕಣ್ಣುಗಳು ಹೇಳುತ್ತಿವೆ ಎಂದೆಲ್ಲಾ ಕಾಮೆಂಟ್ ಗಳನ್ನ ಮಾಡುತ್ತಿದ್ದಾರೆ.
ಅಂದ್ಹಾಗೆ ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ವಶಿಷ್ಠ ಸಿಂಹ , ರಾಗಿಣಿ , ಅನಂತ್ ನಾಗ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಸಾಕಷ್ಟು ಸೆಲೆಬ್ರಟಿಗಳು ಕೋವಿಡ್ ವ್ಯಾಕ್ಸಿನ್ ಪಡೆದಿದ್ದಾರೆ. ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ.
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.