ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕಾದರೆ, ನ್ಯಾಯ ದೊರಕಬೇಕಿದ್ದರೆ ನ್ಯಾಯಾಂಗ ತನಿಖೆ ನಡೆಸುವುದು ಉತ್ತಮವಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಯ ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುವುದು ಕಷ್ಟಸಾಧ್ಯ. ಹೀಗಾಗಿ ಪಕ್ಷದ ರಾಜಕೀಯಗಳನ್ನು ಬದಿಗೊತ್ತಿ, ದಾಳಿಗೊಳಗಾದ ಶಾಸಕನಿಗೆ ರಕ್ಷಣೆ ನೀಡಬೇಕು. ಸರ್ಕಾರ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಖರ್ಗೆ ಅವರು ಆಗ್ರಹಿಸಿದ್ದಾರೆ.
10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ – ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್
ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...








