Mallikarjun Kharge | ಸ್ವಂತ ಕಾರಿಲ್ಲ.. ಆದ್ರೂ ಖರ್ಗೆ ಆಸ್ತಿ ಎಷ್ಟು ಗೊತ್ತಾ ?
ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ನೂತನ ಅಧ್ಯಕ್ಷರಾಗಿ ಚುನಾಯಿತಗೊಂಡಿದ್ದಾರೆ.
ಆ ಮೂಲಕ 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಸಾರಥಿಯಾಗಿದ್ದಾರೆ.
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಹೊರಬಿದ್ದಿದೆ. ಅದರಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ.
ಈ ಚುನಾವಣೆಯಲ್ಲಿ ಒಟ್ಟು 9385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು.
ಈ ಪೈಕಿ ಮಲ್ಲಿಕಾರ್ಜುನ್ ಖರ್ಗೆ ಅವರು 7897 ಮತಗಳನ್ನು ಪಡೆದು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.
ಖರ್ಗೆ ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1072 ಮತಗಳನ್ನು ಪಡೆದು ಸೋಲುಂಡಿದ್ದಾರೆ.
ಇದರೊಂದಿಗೆ ಕಾಂಗ್ರೆಸ್ ನ ಭೀಷ್ಮ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ.
ಹಾಗಾದ್ರೆ ಹಲವಾರು ವರ್ಷಗಳಿಂದ ರಾಜಕೀಯದಲ್ಲಿರುವ ಖರ್ಗೆ ಬಳಿ ಎಷ್ಟು ಆಸ್ತಿ ಇದೆ ?

ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಹೇಳಿದ್ದರು.
ಖರ್ಗೆ ಅವರು ಆರಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಈ ಬ್ಯಾಂಕ್ ಗಳಲ್ಲಿ 1 ಕೋಟಿಗೂ ಹೆಚ್ಚು ಠೇವಣಿ ತೋರಿಸಲಾಗಿದೆ.
ಅವರು ಎನ್ ಎಸ್ ಎಸ್, ಅಂಚೆ ಉಳಿತಾಯ ಯೋಜನೆ, ಎಲ್ ಐಸಿಯಂತಹ ಸರ್ಕಾರದ ಯೋಜನೆಗಳಲ್ಲಿ ಯಾವುದೇ ಹೂಡಿಕೆ ಮಾಡಿಲ್ಲ.
ಆದ್ರೆ 25 ಲಕ್ಷ ರೂಪಾಯಿಗೂ ಹೆಚ್ಚು ಷೇರು, ಬಾಂಡ್ ಗಳಲ್ಲಿ ಹೂಡಿಕೆ ಮಾಡಿದ್ದಾರಂತೆ.
ಇನ್ನು ಸ್ಥಿರ ಠೇವಣಿಗಳ ಬಗ್ಗೆ ಹೇಳೋದಾದ್ರೆ ಅವರು ಎಂಟು ಖಾತೆಗಳನ್ನು ಹೊಂದಿದ್ದು, ಎಸ್ ಬಿಐನಲ್ಲಿ 65 ಲಕ್ಷ ಸ್ಥಿರ ಠೇವಣಿಯಲ್ಲಿ ಮಾತ್ರ ಹೂಡಿಕೆ ಮಾಡಲಾಗಿದೆ.
ಸ್ವತಃ ಖರ್ಗೆ ಅವರೇ ನೀಡಿರುವ ಅಫಿಡವಿಟ್ ಪ್ರಕಾರ ಅವರ ಹೆಸರಿನಲ್ಲಿ ಯಾವುದೇ ವಾಹನವಿಲ್ಲ. ಜೊತೆಗೆ ಅವರ ಬಳಿ ಯಾವುದೇ ರೀತಿಯ ಅಸ್ತ್ರವಿಲ್ಲ.
ಒಟ್ಟಾರೆ ಇಷ್ಟು ದಿನ ಕಾಂಗ್ರೆಸ್ ಪಕ್ಷದ ನಿಷ್ಠಾವಂತರ ನಾಯಕರಾಗಿದ್ದ ಮಲ್ಲಿಕಾರ್ಜುನ್ ಖರ್ಗೆ ಇದೀಗ ಪಕ್ಷದ ಅಧ್ಯಕ್ಷರಾಗಿದ್ದು, ಇನ್ಮುಂದೆ ಪಕ್ಷವನ್ನು ಮುನ್ನಡೆಸಲಿದ್ದಾರೆ.







