ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರಿಗೆ ಇಂಡಿಯಾ ಮೈತ್ರಿಕೂಟದ (I.N.D.I.A Alliance) ಜವಾಬ್ದಾರಿ ಕೂಡ ನೀಡಲಾಗಿದೆ ಎನ್ನಲಾಗಿದೆ. ಇಂಡಿಯಾ ಮೈತ್ರಿಕೂಟ ಈ ಕುರಿತು ಅಧಿಕೃತ ಘೋಷಣೆ ಮಾಡಬೇಕಿದೆ.
ಬಿಹಾರ ಸಿಎಂ ಹಾಗೂ ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ (Nitish Kumar) ಸಂಚಾಲಕರಾಗಿ ಆಯ್ಕೆಯಾಗಿದ್ದು, ಅವರು ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಸಭೆಗೆ ಗೈರಾಗಿದ್ದರು ಎಂದು ತಿಳಿದು ಬಂದಿದೆ.
ಮಲ್ಲಿಕಾರ್ಜುನ ಖರ್ಗೆ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಎಎಪಿ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಮೈತ್ರಿಕೂಟದ ಹಲವು ಸದಸ್ಯರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.