Mallikarjun Kharge | ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ
ನವದೆಹಲಿ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆ ಮೂಲಕ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಗೆಲುವು ಖಚಿತ ಎಂದು ಅಂದಾಜಿಸಲಾಗುತ್ತಿದೆ.
ಅಂದಹಾಗೆ ಕಾಂಗ್ರೆಸ್ ನಲ್ಲಿ ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮವಿದೆ.

ಹೀಗಾಗಿ ಅವರು ರಾಜ್ಯಸಭಾ ವಿಪಕ್ಷ ನಾಯಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ್ ಖರ್ಗೆ, ಕೇರಳದ ಶಶಿ ತರೂರ್, ಕೆ.ಎಲ್ ತ್ರಿಪಾಠಿ ಅವರು ಸ್ಪರ್ಧಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, 19ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.