ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ʻಸುಳ್ಳಿನ ಸರದಾರʼ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ರಾಹುಲ್ ಗಾಂಧಿ ಖಾಲಿ ಹಾಳೆಯಿರುವ ಸಂವಿಧಾನ ಪುಸ್ತಕ ಪ್ರತಿಯನ್ನು ಜನರಿಗೆ ಹಂಚಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ಮಲ್ಲಿಕಾರ್ಜನು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ (Maharashtra) ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ರಾಹುಲ್ ಗಾಂಧಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಸಾರ್ವಜನಿಕ ಸಭೆಯೊಂದರಲ್ಲಿ ಸಂವಿಧಾನದ ಪ್ರತಿ ಎನ್ನಲಾದ ಕೆಂಪು ಬಣ್ಣದ ಪುಸ್ತಕವನ್ನು ಜನರಿಗೆ ವಿತರಿಸಲಾಗಿತ್ತು. ಆದರೆ, ಅದರಲ್ಲಿ ಖಾಲಿ ಹಾಳೆಗಳಿವೆ ಎಂದು ಪ್ರಧಾನಿ ಟೀಕಿಸಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದು (ಭಾನುವಾರ) ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.