ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹಣೆಗೆ ಪೆಟ್ಟಾಗಿರುವ ಕಾರಣ ತೀವ್ರ ನಿಗಾದಲ್ಲಿದ್ದರು. ಮನೆಯ ಆವರಣದಲ್ಲಿ ಬಿದ್ದಿದ್ದರಿಂದಾಗಿ ಮುಖ್ಯಮಂತ್ರಿ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಮೂರು ಹೊಲಿಗೆ ಹಾಕಿದ್ದರು.
ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಮಮತಾ ಬ್ಯಾನರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.