ಪಶ್ಚಿಮ ಬಂಗಾಳ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದೀದಿ..!
ಪಶ್ಚಿಮ ಬಂಗಾಳ: ನಂದಿಗ್ರಾಮ ವಿಧಾನಸಭಾ ಕಷೇತ್ರದಿಂದ ನಾಮಪತ್ರ ಸಲ್ಲಿಸಿ ವಾಪಸ್ ಆಗ್ತಿದ್ದ ವೇಳೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ಅಪರಿಚಿತರು ತಳ್ಳಿದ ಪರಿಣಾಮ ಕಾಲಿಗೆ ಗಾಯವಾಗಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಬಂದು ವೀಲ್ ಚೇರ್ ಮುಖಾಂತರವೇ ಮಮತಾ ಬ್ಯಾನರ್ಜಿ ಅವರನ್ನು ಆಸ್ಪತ್ರೆಯಿಂದ ಹೊರ ಕರೆ ತರಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಕೈ ಮುಗಿದರು. ನಂದಿಗ್ರಾಮದಲ್ಲಿ ಪ್ರಚಾರದ ವೇಳೆ ಮಮತಾ ಬ್ಯಾನರ್ಜಿ ಮೇಲೆ ಅಪರಿಚಿತರು ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಕಾರಿನ ಬಳಿ ನಾಲ್ಕೈದು ಮಂದಿ ತಳ್ಳಿ ಹಾಕಿದ ಪರಿಣಾಮ ಎಡಗಾಲಿಗೆ ಗಂಭೀರ ಗಾಯವಾಗಿತ್ತು. ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಮಮತಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ರಾಧೆಶ್ಯಾಮ್ ಸಿನಿಮಾದ ಹೊಸ ಪೋಸ್ಟರ್ ಗೆ ಫ್ಯಾನ್ಸ್ ಫಿದಾ..!
ಒಂದೆಡೆ ಟಿಎಂಸಿ ನಾಯಕರು ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ್ರೆ ಮತ್ತೊಂದೆಡೆ ಮಮತಾ ಬ್ಯಾನರ್ಜಿ ಆಡುತ್ತಿರೋದು ಕೇವಲ ನಾಟಕವಿರಬಹುದು. ಚುನಾವಣೆ ಹಿನ್ನೆಲೆ ಸಿಂಪತಿಗಾಗಿ ನಾಟಕ. ಆದ್ರೆ ಜನರು ನಾಟಕಗಳನ್ನ ನಂಬುವುದಿಲ್ಲ. ಒಂದು ವೇಳೆ ಇದು ನಿಜವೇ ಆದ್ರೆ ಸಿಬಿಐ ತನಿಖೆಯಾಗಬೇಕು. ನಿಜ ಏನೆಂಬೆದು ಎಲ್ಲರಿಗೂ ಗೊತ್ತಾಗಬೇಕು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಆಗ್ರಹಿಸಿದ್ದಾರೆ.