RSS ಮುಖ್ಯಸ್ಥರಾದ ಮೋಹನ್ ಭಾಗವತ್ ಅವರ ಪಶ್ಚಿಮ ಬಂಗಾಳ ಭೇಟಿ ವಿಚಾರವಾಗಿ ಸಿಎಂ ಮಮತಾ ಬ್ಯಾನರ್ಜಿ ಇತ್ತೀಚೆಗೆ ಕಿಡಿಕಾರಿದ್ದಾರೆ..
ನಮ್ಮ ರಾಜ್ಯಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಸಿಹಿ, ಹೂ ಗುಚ್ಛಗಳನ್ನು ನೀಡಿ ಸ್ವಾಗತಿಸಿ. ಆದರೆ, ಯಾವುದೇ ಗಲಭೆಗಳು ನಡೆಯದಂತೆ ಎಚ್ಚರವಹಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ RSS ಮುಖ್ಯಸ್ಥರ ವಾಸ್ತವ್ಯದ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ಟೀಕೆ ‘ಸರ್ಕಾರದ ಪರವಾಗಿ ಅವರಿಗೆ ಸಿಹಿ ತಿಂಡಿ ಮತ್ತು ಹೂ ಗುಚ್ಛ, ಹಣ್ಣುಗಳನ್ನು ನೀಡಿ ಕಳುಹಿಸಬಹುದು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀವು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಲ್ಲದೇ ಅತಿಥಿಗಳನ್ನು ನಾವು ಎಷ್ಟು ಸೌಹಾರ್ದಯುತವಾಗಿ ನಡೆಸಿಕೊಳ್ಳುತ್ತೇವೆ ಎಂಬುದನ್ನು ಅವರು ಅರಿತುಕೊಳ್ಳಲಿ ಎಂದು ವ್ಯಂಗ್ಯಭರಿತವಾಗಿ ಹೇಳಿದ್ದಾರೆ ದೀದಿ.. ಅಲ್ಲದೇ ಮೋಹನ್ ಭಾಗವತ್ಗೆ ಸೂಕ್ತ ರಕ್ಷಣೆ ಒದಗಿಸಿ. ಯಾವುದೇ ಗಲಭೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.