ಚಾಮರಾಜನಗರ: ಹುಲಿ ಉಗುರು ಸಾಗಿಸುತ್ತಿದ್ದವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಚಾಮರಾಜನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರ ತಾಲೂಕು ಬೂದಿಪಡಗ ಗ್ರಾಮದ ಚಿಕ್ಕಮಾದ ಬಂಧಿತ ಆರೋಪಿ. ಬಂಧಿತ ವ್ಯಕ್ತಿ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಎನ್ನಲಾಗಿದೆ. ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಪುಣಜನೂರು ವನ್ಯಜೀವಿ ವಲಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.