Big – Breaking : NSA ಅಜಿತ್ ದೋವೆಲ್ ಮನೆಗೆ ನುಗ್ಗಲು ಯತ್ನಿಸಿದ ಅಪರಿಚಿತ
ದೆಹಲಿಯ ಅತ್ಯಂತ ಸುರಕ್ಷಿತ ಪ್ರದೇಶವಾದ ಲುಟಿಯನ್ಸ್ ವಲಯದಲ್ಲಿ ವಾಸಿಸುವ ಎನ್‌ಎಸ್‌ಎ ಅಜಿತ್ ದೋವಲ್ ಮನೆಗೆ ಅಪರಿಚತ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಭದ್ರತಾ ಪಡೆಗಳನ್ನ ತಪ್ಪಿಸಿ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ದೆಹಲಿ ಪೊಲೀಸರ ವಿಶೇಷ ತಂಡ ಆತನನ್ನ ವಿಚಾರಣೆ ನಡೆಸುತ್ತಿದೆ.
ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದು,ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ವಿಚಾರಣೆ ವೇಳೆ ಆರೋಪಿಯು ತಾನು ಕರ್ನಾಟಕದ ನಿವಾಸಿಯಾಗಿದ್ದು, ಬಾಡಿಗೆ ಕಾರು ಓಡಿಸುತ್ತಿದ್ದೆ ಎಂದು ತಿಳಿಸಿದ್ದಾನೆ. ಪೊಲೀಸರ ಪ್ರಕಾರ ಅತನ ಮಾನಸಿಕ ಸ್ಥಿತಿ ಸರಿ ಇರಲಿಲ್ಲ. ಅತ ತಪ್ಪಾಗಿ ಲುಟ್ಯೆನ್ಸ್ ವಲಯವನ್ನು ತಲುಪಿದ್ದಾನೆ. ಅಥವಾ ಅದಕ್ಕಿಂತ ದೊಡ್ಡ ಪಿತೂರಿಯೋ ನಡೆದಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ.
ಅಜಿತ್ ದೋವಲ್ ಲುಟ್ಯೆನ್ಸ್ ವಲಯದ 5 ಜನಪಥ್ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ಇಂದರ್ ಕುಮಾರ್ ಗುಜ್ರಾಲ್ ಇಲ್ಲಿ ವಾಸಿಸುತ್ತಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಂಗಲೆ ಕೂಡ ದೋವಲ್ ಅವರ ಬಂಗಲೆಯ ಪಕ್ಕದಲ್ಲಿದೆ ಇದೆ.
ಸರ್ಜಿಕಲ್ ಸ್ಟ್ರೈಕ್‌ನ ಮಾಸ್ಟರ್ ಮೈಂಡ್
2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸರ್ಜಿಕಲ್ ಸ್ಟ್ರೈಕ್ ನಡೆಸಲು ಯೋಜಿಸಿತ್ತು. ಅದರ ನಂತರ 26 ಫೆಬ್ರವರಿ 2019 ರಂದು, ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು LOC ಅನ್ನು ದಾಟಿ ಬಾಲಾಕೋಟ್‌ನಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದವು. ದೋವಲ್ ಅವರು ಸುಮಾರು 7 ವರ್ಷಗಳ ಕಾಲ ಪಾಕಿಸ್ತಾನದಲ್ಲಿ ಗೂಢಚಾರರಾಗಿದ್ದರು ಎಂಬುದೂ ಪ್ರಸಿದ್ಧವಾಗಿದೆ. ಇದಲ್ಲದೆ, ಆಪರೇಷನ್ ಬ್ಲೂ ಸ್ಟಾರ್ ಮತ್ತು ಬ್ಲೂ ಥಂಡರ್‌ನಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.








