ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ವೇಳೆ ಭಾರೀ ಮಳೆಯಿಂದ ಯಳಸಂಗಿ – ಹಡಲಗಿ ನಡುವಿನ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ನೀರಿನಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋದ ಪಘಟನೆ ನಡೆದಿದೆ. ಬಿಂದಿಗೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ಬರು ಸ್ಥಳೀಯರ ಮಾತನ್ನು ಲೆಕ್ಕಿಸದೆ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಸೈಕಲ್ ನಲ್ಲಿ ಹೊರಟಿದ್ದ ಪರಿಣಾಮ ಈ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಸ್ಥಳೀಯರು ಆತನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!
ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....








