ಕೊರೊನಾಗೆ ತಾಯಿ ಬಲಿ – ಶವದ ಮುಂದೆ ಮದುವೆಯಾದ ಮಗ
ಹೈದರಾಬಾದ್ : ತಂದೆ ತಾಯಿ ಆಶೀರ್ವಾದದೊಂದಿಗೆ ಖುಷಿಖುಷಿಯಾಗಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಲು ವಿದೇಶದಿಂದ ಭಾರತಕ್ಕೆ ಬಂದಿದ್ದ ಮಗ ಕಡೆಗೆ ತಾಯಿಯ ಶವದ ಎದುರು ಮದುವೆಯಾಗಿರುವ ಘಟನೆ ನಡೆದಿದೆ..
ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಇಸ್ಮಾಯಿಲ್ ಖಾನ್ಪೇಟ್ ನಲ್ಲಿ ಇಂತಹದೊಂದು ಘಟನೆ ನಡೆದಿದೆ. ರಾಕೇಶ್ ಎಂಬಾತ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದ. ಮದುವೆಗೆಂದು ಅಮೆರಿಕಾದಿಂದ ತಾಯ್ನಾಡಿಗೆ ಮರಳಿದ್ದ. ಆದರೆ ಆತನ ತಾಯಿ ಪಾಲ್ಪಾನೂರಿ ರೇಣುಕಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, ಆಸ್ಪತ್ರೆಯಿಂದ ಗ್ರಾಮಕ್ಕೆ ಮೃತದೇಹವನ್ನು ಕರೆತಂದ ವೇಳೆ ತಾಯಿಯ ಮೃತದೇಹದ ಮುಂದೆಯೇ ದು:ಖದಲ್ಲೇ ರಾಕೇಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.