ಯಾದಗಿರಿ: ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ (Yadagiri) ಸುರಪುರ (Surapura) ತಾಲೂಕಿನ ಮಾಚಗುಂಡಾಳ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಾಚಗುಂಡಾಳ ಗ್ರಾಮದ ಶರಣಪ್ಪ ಮೇಟಿ (28) ಎಂದು ಗುರುತಿಸಲಾಗಿದೆ. ಗ್ರಾಮದ ಪಿಡ್ಡಣ್ಣ ಮುತ್ಯಾನ ದೇವಸ್ಥಾನದ ಹಿಂಬದಿಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಕೊಲೆ ಮಾಡಿದ ನಂತರ ಚಾಕುವನ್ನು ಕುತ್ತಿಗೆ ಮೇಲೆ ಇಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಎಸ್ಪಿ ಪೃಥ್ವಿಕ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...








