Vijayapura | ಭೀಮಾತೀರದಲ್ಲಿ ಮತ್ತೆ ರಕ್ತಪಾತ
ವಿಜಯಪುರ : ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ತಮ್ಮನೇ ತನ್ನ ಸ್ವಂತ ಅಣ್ಣನನ್ನು ಕೊಲೆ ಮಾಡಿದ್ದಾನೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಜಗ್ಗೇಶ್ ವಡ್ಡರ್ ಹತ್ಯೆಯಾಗಿರುವ ದುರ್ದೈವಿಯಾಗಿದ್ದು, ರಾಹುಲ್ ವಡ್ಡರ್ ಕೊಲೆ ಆರೋಪಿಯಾಗಿದ್ದಾನೆ.

ಜಗ್ಗೇಶ್ ವಡ್ಡರ್ ದಿನಂಪ್ರತಿ ಕುಡಿಯಲು ಹಣ ಕೇಳುತ್ತಿದ್ದನಂತೆ.
ಇದರಿಂದ ಬೇಸತ್ತಿ ಹೋಗಿದ್ದ ತಮ್ಮ ರಾಹುಲ್ ವಡ್ಡರ್, ಹರಿತವಾದ ಆಯುಧದಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.