ಲೋನ್ ನೀಡದಿದ್ದಕ್ಕೆ ಬ್ಯಾಂಕ್ ಬೆಂಕಿ ಇಟ್ಟ ವ್ಯಕ್ತಿ
ಹಾವೇರಿ ಜಿಲ್ಲೆಯ ಬ್ಯಾಡಗಿಯ ಹೆಡಿಗ್ಗೊಂಡದಲ್ಲಿ ಘಟನೆ
ರಟ್ಟಿಹಳ್ಳಿಯ ನಿವಾಸಿ ವಸೀಮ್ (33) ಆರೋಪಿ
ಕಾಗಿನೆಲೆ ಪೊಲೀಸರ ವಶಕ್ಕೆ ಆರೋಪಿ ವಸೀಮ್
ಹಾವೇರಿ : ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬಪೆಟ್ರೋಲ್ ಸುರಿದು ಬ್ಯಾಂಕ್ ಗೆ ಬೆಂಕಿ ಇಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ.
33 ವರ್ಷದ ರಟ್ಟಿಹಳ್ಳಿಯ ನಿವಾಸಿ ವಸೀಮ್, ಬ್ಯಾಂಕ್ ಗೆ ಬೆಂಕಿ ಇಟ್ಟ ಆರೋಪಿಯಾಗಿದ್ದಾನೆ.
ಬ್ಯಾಂಕ್ ಮ್ಯಾನೇಜರ್ ಸಾಲ ನೀಡಲು ನಿರಾಕರಿಸಿದ್ದಕ್ಕೆ ವಸೀಮ್ ಬೆಳಗಿನ ಜಾವ ಹೆಡಿಗ್ಗೊಂಡ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ಗೆ ಬೆಂಕಿ ಹಚ್ಚಿ ಪರಾರಿಯಾಗಲು ಯತ್ನಿಸಿದ್ದಾನೆ.
ಈ ವೇಳೆ ಈತನನ್ನು ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಕಿಯಿಂದಾಗಿ ಬ್ಯಾಂಕ್ನಲ್ಲಿದ್ದ ಕಾಗದ ಪತ್ರಗಳು ಹಾಗೂ ನಗದು ಸುಟ್ಟು ಕರಕಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.