ಮುಂಬೈ: ಮಹಿಳೆಯೊಬ್ಬರ ತನ್ನ ಪ್ರಿಯಕರನೊಂದಿಗೆ ಇದ್ದ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, ಅವರ ಮಾಜಿ ಪತಿ ಸಾಮಾಜಿಕ ಜಾಲತಾಣದಲ್ಲ ಹಂಚಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಥಾಣೆಯ (Thane) ಡೊಂಬಿವಲಿಯಲ್ಲಿ ನಡೆದಿದೆ. ಮಹಿಳೆ (Woman)ಯ ತನ್ನ ಪ್ರಿಯಕರನೊಂದಿಗೆ ಇರುವುದನ್ನು ರಹಸ್ಯವಾಗಿ ಮಾಜಿ ಪತಿ ಚಿತ್ರೀಕರಿಸಿದ್ದಾನೆ. ನಂತರ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಮಹಿಳೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಪತ್ನಿ ಆತನೊಂದಿಗೆ ವಿಚ್ಛೇದನ ಪಡೆದಿದ್ದರು ಎನ್ನಲಾಗಿದೆ. ಸದ್ಯ ವಿಚ್ಛೇದತಿ ಪತ್ನಿ ನೀಡಿದ ದೂರಿನಂತೆ ವಿಚ್ಛೇದಿತ ಪತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಾನನಷ್ಟ ಪ್ರಕರಣ ದಾಖಲಿಸಲಾಗಿದೆ.
ಈತ ಮಹಿಳೆಯ ಮನೆಯಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ್ದ. ಇದರಿಂದ ಖಾಸಗಿ ವೀಡಿಯೋ ಚಿತ್ರೀಕರಿಸಿದ್ದಾನೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.