ಹೋಳಿ ಆಚರಣೆ ವೇಳೆ ತನಗೆ ತಾನೇ ಚಾಕು ಇರಿದುಕೊಂಡು ಸಾವನ್ನಪ್ಪಿದ ಯುವಕ
ಹೋಳಿ ಆಚರಣೆ ಮಾಡುವಾಗ ವ್ಯಕ್ತಿಯೊಬ್ಬ ಚಾಕುವಿನಿಂದ ತನ್ನನ್ನ ತಾನೇ ತಿವಿದುಕೊಂಡು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನ ಬಂಗಾಂಗಾ ಪ್ರದೇಶದಲ್ಲಿ ನಡೆದಿದೆ.
ಹೋಳಿ ಆಚರಣೆ ವೇಳೆ ಜನರು ಡ್ಯಾನ್ಸ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಕೈಯಲ್ಲಿ ಚಾಕು ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ಯುವಕ ತನ್ನನ್ನು ತಾನೇ ಇರಿದುಕೊಂಡಿದ್ದಾನೆ ಎಂದು ಬಂಗಾಂಗ ಪೊಲೀಸ್ ಠಾಣೆಯ ತನಿಖಾಧಿಕಾರಿ ಯೋಗೇಶ್ ಸಿಂಗ್ ಹೇಳಿದ್ದಾರೆ.
https://twitter.com/i/status/1505070217734811649
ವ್ಯಕ್ತಿಯನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ವೈದ್ಯರು ಗೋಪಾಲ್ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
“ಮೃತ ಗೋಪಾಲ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀ ಅರಬಿಂದೋ ವೈದ್ಯಕೀಯ ವಿಜ್ಞಾನ ಸಂಸ್ಥೆ (SAIMS) ಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ,’’ ಪೊಲೀಸ್ ಅಧಿಕಾರಿ ಎಂದು ಯೋಗೇಶ್ ಸಿಂಗ್ ಹೇಳಿದ್ದಾರೆ.







