Mandya | ಅಪ್ಪು ಅಭಿಮಾನಿ ಆತ್ಮಹತ್ಯೆಗೆ ಶರಣು
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೊಸ ಆನಂದೂರು ಗ್ರಾಮದ 22 ವರ್ಷದ ಕಿರಣ್ ಮೃತ ಯುವಕ. ಈತ ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಪುಣ್ಯಸ್ಮರಣೆಯಲ್ಲಿ ಭಾಗವಹಿಸಿ ಅನ್ನಸಂತರ್ಪಣೆ ನಡೆಸಿದ್ದ.
ಆದರೆ ಕಾರ್ಯಕ್ರಮದ ಬಳಿಕ ಮನೆಗೆ ತೆರಳಿದ ಕಿರಣ್, ರಾತ್ರಿ 10 ಗಂಟೆಯಲ್ಲಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.