Mandya : ರಂಗಸ್ಥಳದಲ್ಲೇ ಕುಸಿದುಬಿದ್ದು ಕಲಾವಿದ ಸಾವು…
ರಂಗಭೂಮಿಯಲ್ಲಿ ಪಾತ್ರ ನಿರ್ವಹಿಸುತ್ತಿದ್ದಗಲೇ ಕುಸಿದು ಬಿದ್ದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆಯುತ್ತಿದ್ದ ಕೃಷ್ಣ ಸಂಧಾನ ನಾಟಕದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ(46) ಕುಸಿದು ಬಿದ್ದು ರಂಗಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು.
ಕಲಾವಿದ ನಂಜಯ್ಯ ಕುಸಿದು ಬೀಳುತ್ತಿದ್ದಂತೆ ಕೂಡಲೇ ಅಲ್ಲಿದ್ದ ಜನರು ಮಳವಳ್ಳಿ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಪರೀಕ್ಷಿಸಿದ ವೈದ್ಯರು ಕಲಾವಿದ ವೇದಿಕೆಯಲ್ಲೇ ಮೃತಪಟ್ಟಿರುವುದಾಗಿ ಖಚಿತ ಪಡಿಸಿದ್ದಾರೆ. ಇದೀಗ ಕಲಾವಿದ ನಂಜಯ್ಯ ಅವರಿಗೆ ವೇದಿಕೆಯಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗುತ್ತಿದೆ. ಪತಿಯ ಸಾವಿನ ಕೊನೆ ಕ್ಷಣವನ್ನು ಕಂಡ ಪತ್ನಿ, ಮಗಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mandya: Artist dies after collapsing on stage