Mandya | ಆಟೋ – ಕಾರು ಡಿಕ್ಕಿ.. ಮೂವರು ಸಾವು
ಮಂಡ್ಯ : ಆಟೋ – ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
ಆಟೋ ಚಾಲಕ ಶ್ರೀನಿವಾಸ್, ಹಾಗೂ ರವಿ ಕುಮಾರ್, ಭಾಸ್ಕರ್ ಮೃತರು.
ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಪರಿಣಾಮ ಆಟೋದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.

ಡಿಕ್ಕಿಯ ರಭಸಕ್ಕೆ ಆಟೋ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ಸ್ಥಳೀಯರು ಮಳವಳ್ಳಿ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ಸಂಬಂಧ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.