Mandya | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ
ಮಂಡ್ಯ : ಕೆ.ಆರ್.ಎಸ್ ಸುತ್ತಮುತ್ತ ಶಾಶ್ವತ ಗಣಿಗಾರಿಕೆ ನಿಲ್ಲಿಸಬೇಕು, ಟನ್ ಕಬ್ಬಿಗೆ 4500 ರೂ ನಿಗದಿ ಮಾಡಬೇಕು, ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು.
ಹೀಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ರಸ್ತೆಗಿಳಿದಿದೆ.
ಮೈಸೂರು ಸಂಪರ್ಕ ಕಲ್ಪಿಸುವ ಹೆದ್ದಾರಿ ಸಂಪೂರ್ಣ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಮಂಡ್ಯ, ಮದ್ದೂರು, ಕೆ.ಆರ್.ಪೇಟೆ, ಮಳವಳ್ಳಿ, ಶ್ರೀರಂಗಪಟ್ಟಣ ಹಾಗೂ ಮೈಸೂರು ಜಿಲ್ಲೆಯ ಇಲವಾಲ, ಟಿ.ನರಸೀಪುರ, ನಂಜನಗೂಡು, ಹುಣಸೂರಿನಲ್ಲಿ ಹೆದ್ದಾರಿ ತಡೆಯಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾಗೇಂದ್ರ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಜಿಲ್ಲಾಧ್ಯಕ್ಷ ಕೆಂಪೂಗೌಡ, ಪ್ರಸನ್ನ ಎನ್.ಗೌಡ ಸೇರಿದಂತೆ ಹಲವು ಮುಖಂಡರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.








