ಮಂಡ್ಯ | ನಿತ್ಯ ಸಚಿವ ಕೆ.ವಿ.ಶಂಕರಗೌಡರ ಪತ್ನಿ ನಿಧನ
ನಿತ್ಯ ಸಚಿವ ಕೆ.ವಿ.ಶಂಕರಗೌಡರ ಪತ್ನಿ ಶ್ರೀಮತಿ ಸುಶೀಲಮ್ಮ(87) ಅವರು ಶುಕ್ರವಾರ ನಸುಕಿನ ಜಾವ ನಿಧನರಾಗಿದ್ದಾರೆ.
ಮೈಸೂರಿನಲ್ಲಿನ ಮಗಳ ಮನೆಯಲ್ಲಿದ್ದ ಸುಶೀಲಮ್ಮ ಅವರು ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ನಗರದ ಬಂದಿಗೌಡ ಬಡಾವಣೆಯಲ್ಲಿನ ಅವರ ನಿವಾಸಕ್ಕೆ ತರಲಾಗಿದೆ.

ಬೆಳಗ್ಗೆ 10 ಗಂಟೆವರೆಗೆ ಸುಶೀಲಮ್ಮ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಮಂಡ್ಯದಲ್ಲಿ ಇರಿಸಲಾಗಿದ್ದು, ನಂತರ ಕೀಲಾರ ಗ್ರಾಮಕ್ಕೆ ಕೊಂಡೊಯ್ದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.