Mandya | ಭದ್ರಕೋಟೆ ಗಟ್ಟಿ ಮಾಡಿಕೊಳ್ಳಲು ದಳಪತಿ ಕಸರತ್ತು
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆ ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆಯಾಗಿತ್ತು. ಆದ್ರೆ ಕಳೆದ ಕೆಲವು ವರ್ಷಗಳಿಂದ ಮಂಡ್ಯದಲ್ಲಿ ಜೆಡಿಎಸ್ ಹಿಡಿತ ಸಡಿಲಗೊಳ್ಳುತ್ತಿದೆ. ಈಗಾಗಲೇ ಲೋಕಸಭಾ, ಎಂಎಲ್ ಎ, ಎಂಎಲ್ ಸಿ ಚುನಾವಣೆಗಳಲ್ಲಿ ಜೆಡಿಎಸ್ ಸೋತಿದೆ.
ಹೀಗಾಗಿ ಡ್ಯಾಮೇಜ್ ಕಂಟ್ರೋಲ್ ಗೆ ದಳಪತಿಗಳು ಮುಂದಾಗಿದ್ದು, ನಾಗಮಂಗಲದಿಂದ ಚುನಾವಣೆ ಅಖಾಡಕ್ಕೆ ಧುಮುಕಲು ಕುಮಾರಸ್ವಾಮಿ ಮುಂದಾಗಿದ್ದಾರಂತೆ.

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ಹಿಡಿತ ಇಟ್ಟುಕೊಳ್ಳಲು ನಾಳೆ ನಾಗಮಂಗದಲ್ಲಿ ಜೆಡಿಎಸ್‌ನ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಚಲುವರಾಯಸ್ವಾಮಿ ಹಾಗೂ ಶಿವರಾಮೇಗೌಡಗೆ ಟಕ್ಕರ್ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಸಮಾವೇಶಕ್ಕೆ 40 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.








