ಸಕ್ಕರೆ ನಾಡು ಮಂಡ್ಯ ಜಿಲ್ಲೆ ಮತ್ತೊಂದು ವಾರ ಕಂಪ್ಲೀಟ್ ಲಾಕ್ Lockdown
ಮಂಡ್ಯ : ಜಿಲ್ಲೆಯಲ್ಲಿ ಕೊರೊನಾ ಕಂಟ್ರೋಲ್ ಮಾಡುವ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ವಾರ ಕಂಪ್ಲೀಟ್ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಕೊರೊನಾ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ರಾಜ್ಯ ಸರ್ಕಾರ 11 ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ.
ಇದರಲ್ಲಿ ಮಂಡ್ಯ ಜಿಲ್ಲೆ ಇರಲಿಲ್ಲ. ಆದರೆ ಜಿಲ್ಲಾಡಳಿತ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಜೂನ್ 15, 16, 18, 19ರ ದಿನಗಳಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದೆ.
ಈ ದಿನಗಳಲ್ಲಿ ಹಣ್ಣ, ತರಕಾರಿ, ದಿನಸಿ, ಮಾಂಸ, ಮದ್ಯ ಮಾರಾಟಕ್ಕೆ ನಿಷೇಧ ಏರಲಾಗಿದೆ.
ಮೆಡಿಕಲ್, ಹಾಲಿನ ಅಂಗಡಿ, ಎಟಿಎಂ ಹಾಗೂ ಪೆಟ್ರೋಲ್ ಬಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಜೂನ್ 14, 15 ರ ದಿನಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.