Mandya | ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಕೊಂದ ಪತ್ನಿ
ಮಂಡ್ಯ : ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
ಶಿವಕುಮಾರ್ (35) ಕೊಲೆಯಾದ ವ್ಯಕ್ತಿ. ನಾಗಮ್ಮ ಕೊಲೆ ಆರೋಪಿಯಾಗಿದ್ದಾರೆ.
ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಣ್ಣ ಕಟ್ಟಿದ್ದಾಳೆ ಎಂದು ಶಿವಕುಮಾರ್ ಅವರ ತಾಯಿ ನಾಗಮ್ಮ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ 13 ವರ್ಷದ ಹಿಂದೆ ಶಶಿಕುಮಾರ್ ನಾಗಮ್ಮ ಪ್ರೇಮ ವಿವಾಹವಾಗಿತ್ತು. ಒಬ್ಬರನ್ನೊಬ್ಬರು ಪ್ರೀತಿಸಿ ವಿವಾಹವಾಗಿದ್ದರು.
ಸದ್ಯ ಶಿವಕುಮಾರ್ ಅವರನ್ನು ನಾಗಮ್ಮಳೇ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.
ಸದ್ಯ ಪ್ರಕರಣ ದಾಖಲಿಸಿಕೊಂಡ ಮಳವಳ್ಳಿ ಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.
ಆರೋಪಿತೆ ನಾಗಮ್ಮಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.