ಅತ್ತಿಗೆಯನ್ನ ಬರ್ಬವಾಗಿ ಕೊಂದು ಬಳಿಕ , ನೇಣಿಗೆ ಶರಣಾದ ನಾದಿನಿ
ಮಂಡ್ಯ: ಅತ್ತಿಗೆ ನಾದಿನಿಯ ನಡುವೆ ಶುರುವಾದ ಜಗಳವೊಂದು ಕೊಲೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆಯೊಂದು ಮಂಡ್ಯದ ಕಂಬಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾದಿನಿ ಗಿರಿಜಾ (31) ಎಂಬಾಕೆ ತನ್ನ ಅತ್ತಿಗೆ (32 ) ಪ್ರಿಯಾಂಕಾ ಎಂಬಾಕೆಯನ್ನ ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾಳೆ.. ಕೌಟುಂಬಿಕ ವಿಚಾರಕ್ಕೆ ಪ್ರಿಯಾಂಕ ಹಾಗೂ ಗಿರಿಜಾ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ಜಗಳ ಇತ್ತೀಚೆಗೆ ತಾರಕಕ್ಕೇರಿ ಗಿರಿಯಾ ಪ್ರಿಯಾಂಕಾ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಲೆ.. ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಲೆ. ಈ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








