3 ಲಕ್ಷ ಅಂತರದಿಂದ ಮಂಗಳಾ ಗೆಲುವು : ಬಿಎಸ್ವೈ B S Yediyurappa
ಬೆಳಗಾವಿ : ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮೂರು ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 3 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಲಿದ್ದಾರೆ.
ನಿನ್ನೆ ತಡರಾತ್ರಿವರೆಗೆ ಎಲ್ಲ ಸಮಾಜದ ಮುಖಂಡರ ಜತೆ ಸಭೆ ನಡೆಸಿದ್ದೇನೆ.
ಶಾಸಕರು ಹಾಗೂ ನಮ್ಮ ಮುಖಂಡರ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ.
ನಮ್ಮ ಅಭ್ಯರ್ಥಿ 3 ಲಕ್ಷ ಮತಗಳ ಅಂತರದ ಗೆಲುವು ದಾಖಲಿಸಲಿದ್ದಾರೆ ಎಂದು ನುಡಿದರು.
ಇನ್ನು ಸುರೇಶ ಅಂಗಡಿ ಅವರು ಈ ಹಿಂದೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.
ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ಮಂಗಳಾ ಗೆಲುವಿಗೆ ಶ್ರೀರಕ್ಷೆ ಆಗಲಿದೆ ಎಂದು ಇದೇ ವೇಳೆ ಸಿಎಂ ಹೇಳಿದರು.