Mangalore : ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ಸ್ಪರ್ಧೆ
ಮಂಗಳೂರು : ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಸ್ಪರ್ಧೆಯ ನೆಪದಲ್ಲಿ ಕಿಸ್ಸಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿದ್ದು, ಅದರ ವಿಡಿಯೋ ಲೀಕ್ ಆಗಿದೆ.
ಕಿಸ್ಸಿಂಗ್ನಲ್ಲಿ ತೊಡಗಿದ್ದವರು ಪಿಯುಸಿ ವಿದ್ಯಾರ್ಥಿಗಳಾಗಿದ್ದು ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು.
ಪಂದ್ಯದ ನಿಯಮದಂತೇ ವಿದ್ಯಾರ್ಥಿ, ವಿದ್ಯಾರ್ಥಿನಿ ಎಲ್ಲರ ಎದುರೇ ಚುಂಬನ ಮಾಡಿದ್ದು, ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಂಗಳೂರು ಪೊಲೀಸರು ವಿಡಿಯೋದಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಿದ್ದಾರೆ.
ಅಲ್ಲದೇ ಈ ಚುಂಬನ ಸ್ಪರ್ಧೆಯ ವೇಳೆ ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
ವಿಡಿಯೋವನ್ನ ಯಾವುದೋ ಖಾಸಗಿ ರೂಮ್ನಲ್ಲಿ ಸೆರೆಹಿಡಿಯಲಾಗಿದ್ದು, ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದೆ.
ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರುವ ಸಾಧ್ಯತೆಯಿದ್ದು, ಸದ್ಯ ಮಂಗಳೂರು ಪೊಲೀಸರು ಕಿಸ್ಸಿಂಗ್ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ.








