ಮಂಗಳೂರು : ಖಾಸಗಿ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಕೋವಿಡ್-19 – ನರ್ಸಿಂಗ್ ಕಾಲೇಜು ಸೀಲ್ ಡೌನ್
ಮಂಗಳೂರು, ಫೆಬ್ರವರಿ03: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜನ್ನು ಫೆಬ್ರವರಿ 19ರವರೆಗೆ ಸೀಲ್ ಡೌನ್ ಮಾಡಲಾಗಿದೆ. ಈ ಖಾಸಗಿ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.

ಮಂಗಳೂರಿನ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿ ಇರುವ ಈ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ ಬಹುತೇಕ ವಿದ್ಯಾರ್ಥಿಗಳು ಕೇರಳದವರು. ಕಾಲೇಜು ಪ್ರಾರಂಭದ ನಂತರ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು.
ಹಾಗಾಗಿ ಕೊರೋನಾ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದ್ದು, ಕಾಲೇಜಿನ ನಲವತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಇದೀಗ ಅವರನ್ನೆಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.

ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಉಳ್ಳಾಲ ನಗರಸಭೆಯ ಕಮಿಷನರ್ ಮತ್ತು ಡಿಎಚ್ಒ ಈ ಬಗ್ಗೆ ಪರಿಶೀಲನೆ ನಡೆಸಿದ್ದು 19 ದಿನಗಳ ಮಟ್ಟಿಗೆ ಇಡೀ ಕಾಲೇಜನ್ನು ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಕರಿಬೇವಿನ ಸೊಪ್ಪುಗಳ ಆರೋಗ್ಯ ಪ್ರಯೋಜನಗಳುhttps://t.co/NzME20h64d
— Saaksha TV (@SaakshaTv) February 1, 2021
ನಬಾರ್ಡ್ ಸಹಾಯಧನದ ಜೊತೆಗೆ 1.8 ಲಕ್ಷ ಬಂಡವಾಳ ಹೂಡಿ ವ್ಯಾಪಾರ ಮಾಡಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸಿhttps://t.co/Yd9ZhQl2DX
— Saaksha TV (@SaakshaTv) February 1, 2021








