ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ ವಶ

1 min read

ಮಂಗಳೂರು: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು ಮಂಗಳೂರು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.
ಬಂಟ್ವಾಳದ ಮೊಂಡಕಾಪುವಿನಲ್ಲಿ ಟೊಯೊಟಾ ಕಾರಿನಲ್ಲಿ 50.400 ಲೀಟರ್ ಗೋವಾ ಮದ್ಯ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಆರೋಪಿ ಸಂದೀಪ್ ಲೋಬೋ, ತನ್ನ ಗ್ಯಾರೇಜಿನಲ್ಲಿ 107.600 ಲೀಟರ್ ಮದ್ಯ ಮತ್ತು 34 ಲೀಟರ್ ನಷ್ಟು ಬಿಯರ್ ದಾಸ್ತಾನು ಮಾಡಿದ್ದ ಎನ್ನಲಾಗಿದೆ. ವಶಕ್ಕೆ ಪಡೆದ ಮದ್ಯವನ್ನು ಸರಬರಾಜು ಮಾಡಲು ಬಳಸುತ್ತಿದ್ದ ಟೆಂಪೋ ವಾತಹನವನ್ನು ವಶಕ್ಕೆ ಪಡೆಯಲಾಗಿದೆ. ವಾಹನಗಳು ಸೇರಿದಂತೆ ಅಬಕಾರಿ ಅಧಿಕಾರಿಗಳು 22 ಲಕ್ಷ ಮೌಲ್ಯದ ಮಾಲನ್ನು ವಶಕ್ಕೆ ಪಡೆದು ಆರೋಪಿ ಸಂದೀಪ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd