ಮಂಗಳೂರು : ಶಾಸಕ ಯು.ಟಿ.ಖಾದರ್ ಸಹೋದರನಿಗೆ ಐಟಿ ಶಾಕ್
ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಐಟಿ ದಾಳಿ ಮುಂದುವರಿದಿದ್ದು, ಇಂದು ಶಾಸಕ ಯು.ಟಿ.ಖಾದರ್ ಸಹೋದರನಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಶಾಸಕ ಯು.ಟಿ. ಖಾದರ್ ಸಹೋದರ ಇಫ್ತಿಕಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಇಫ್ತಿಕಾರ್ ಮನೆಗೂ ಐಟಿ ಇಲಾಖೆ ನಿನ್ನೆಯೇ ದಾಳಿ ನಡೆಸಿದ್ದು, ರಾತ್ರಿ ಪೂರ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.
ಇನ್ನು ನಿನ್ನೆ ಬೆಳ್ಳಂ ಬೆಳಿಗ್ಗೆ ಕಡಲನಗರಿಯ ನಾಲ್ವರು ಉದ್ಯಮಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂ. ನಗದು ಮತ್ತು ಭಾರೀ ಪ್ರಮಾಣದ ಚಿನ್ನ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.