ಮಂಗಳೂರಿನಲ್ಲಿ ಶಾಂತಿ ಕದಡುವ ಯತ್ನ : ಗೋಡೆ ಮೇಲೆ `ಲಷ್ಕರ್ ಜಿಂದಾಬಾದ್’ ಬರಹ
ಮಂಗಳೂರು : ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಸಂಘಿಗಳು ಮತ್ತು ಮನುವಾದಿಗಳಿಗೆ ಬೆದರಿಕೆಯೊಡ್ಡಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ ಬರೆದು ಶಾಂತಿ ಕದಡುವ ಯತ್ನ ಮಾಡಿದ್ದಾರೆ.
ಮಂಗಳೂರಿನ ಸಕ್ರ್ಯೂಟ್ ಹೌಸ್ ರಸ್ತೆಯಲ್ಲಿರೋ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ‘ಲಷ್ಕರ್ ಜಿಂದಾಬಾದ್’ ಎಂದು ಕಿಡಿಗೇಡಿಗಳು ಬರೆದಿದ್ದಾರೆ. ಮೇವಿಗಾಗಿ ನಿತ್ಯ ಪರದಾಟ: ಆನೆ ಕಾರಿಡಾರ್ ನಲ್ಲಿ ಕಾಡಾನೆಗಳ ಅಡ್ಡಾದಿಡ್ಡಿ ಓಡಾಟ..!
ಜೊತೆಗೆ `ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ತಾಲಿಬಾನ್ ಅಂಡ್ ಲಷ್ಕರ್-ಇ-ತೊಯ್ಬಾ ಟು ಡೀಲ್ ವಿತ್ ಸಂಘೀಸ್ ಆಂಡ್ ಮನ್ವೇದಿಸ್ ಎಂದು ಇಂಗ್ಲೀಷ್ ನಲ್ಲಿ ಬರೆಯಲಾಗಿದೆ.
ಅಂದರೆ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್ ಸಂಘಟನೆಗೆ ಆಹ್ವಾನಿಸಲು ನಮ್ಮನ್ನು ಪ್ರೇರೇಪಿಸಬೇಡಿ ಎಂದಾಗಿದೆ. ರೈತರನ್ನು ಗೌರದಿಂದ ನೋಡಿ, ಸಮಸ್ಯೆ ಬಗ್ಗೆ ಕುಳಿತು ಚರ್ಚೆ ಮಾಡಿ: ಮೋದಿಗೆ ಗೌಡರ ಕಿವಿಮಾತು..!
ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಂದ ಕದ್ರಿ ಪೊಲೀಸರು ವಿವಾದಿತ ಬರಹ ಮೇಲೆ ಪೇಂಟಿಂಗ್ ಮಾಡಿಸಿ, ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










