Mangalore | ಎಂಡಿಎಂಎ ಸಾಗಾಟ : ವಿದೇಶಿ ಪ್ರಜೆಯ ಬಂಧನ
ಮಂಗಳೂರು : ನಿಷೇಧಿತ ಮಾದಕ ದ್ರವ್ಯ ಸಾಗಾಟ – ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆಯೊಬ್ಬನನ್ನು ಸೆನ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಲೂಯಲ್ ಡೇನಿಯಲ್ ಜಸ್ಟಿನ್ ಬೌಲೋ ಯಾನೆ ಡ್ಯಾನಿ ಬಂಧಿತ ಆರೋಪಿಯಾಗಿದ್ದಾನೆ.
ಬಂಧಿತ ಆರೋಪಿ ರಿಪಬ್ಲಿಕ್ ಆಫ್ ಸೌತ್ ಸೂಡನ್ ನ ನಿವಾಸಿಯಾಗಿದ್ದು, ಸದ್ಯ ಬೆಂಗಳೂರಿನ ಗುಂಜುರು ಪಾಳ್ಯದಲ್ಲಿ ವಾಸ ಮಾಡುತ್ತಿದ್ದ.
2022 ಜೂನ್ 15 ರಂದು ಸಿಸಿಬಿ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ಕು ಜನರನ್ನು ದಸ್ತಗಿರಿ ಮಾಡಿದ್ದರು.
ಈ ಸಂಬಂಧ ತನಿಖೆ ಮುಂದುವರೆಸಿದ್ದ ಸೆನ್ ಕ್ರೈಂ ಪೊಲೀಸರು ಡ್ಯಾನಿಯನ್ನು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.