ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ : ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ Mangalore saaksha tv
ಮಂಗಳೂರು : ಅನ್ಯಕೋಮಿನ ಯುವಕ-ಯುವತಿ ಒಂದೇ ಕಾರಿನಲ್ಲಿ ಚಲಿಸುತ್ತಿದ್ದ ಕಾರಣಕ್ಕೆ ಯುವಕರ ಗಂಪೊಂದು ಕಾರು ಅಡ್ಡಗಟ್ಟಿ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಭಾನುವಾರ ಸಂಜೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಲ್ಪೆ ಬೀಚ್ ಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳು ಎಂಬ ಕಾರಣಕ್ಕೆ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ.
ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಶರೀಫ್ ಕಾರಿನ ಮೇಲೆ ಆಗುತ್ತಿದ್ದ ದಾಳಿಯನ್ನು ತಡೆಯಲು ಯತ್ನಿಸಿದ್ದಾರೆ.
ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇನ್ನು ಈ ಪ್ರಕರಣದ ಸಂಬಂಧ ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.









