Mangalore | ರಾಜ್ಯ ಸರ್ಕಾರದ ವಿರುದ್ಧ ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆ
ಮಂಗಳೂರು : ಇತ್ತೀಚೆಗೆ ಮಂಗಳೂರಿನಲ್ಲಿ ಕೊಲೆಯಾದ ಫಾಜಿಲ್, ಮಸೂದ್ ಕುಟುಂಬಕ್ಕೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಮುಸ್ಲಿಂ ಐಕ್ಯತಾ ವೇದಿಕೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಮಂಗಳೂರಿನ ಕ್ಲಾಕ್ ಟವರ್ ವೃತ್ತದ ಬಳಿ ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಮಂಗಳೂರಿನಲ್ಲಿ ನಡೆದ ಮೂರು ಕೊಲೆಗಳು ರಾಜ್ಯದ ಗಮನ ಸೆಳೆದಿತ್ತು. ಅದರಲ್ಲೂ ಪ್ರವೀಣ್ ನೆಟ್ಟಾರು ಕೊಲೆ ರಾಜ್ಯದಲ್ಲಿ ಸಂಚಲನವನ್ನು ಸೃಷ್ಠಿ ಮಾಡಿತ್ತು.

ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು.
ಆದ್ರೆ ಅದೇ ಸಮಯದಲ್ಲಿ ಕೊಲೆಯಾದ ಬಿ ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಕುಟುಂಬಕ್ಕೆ ಈವರೆಗೂ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಐಕ್ಯತಾ ವೇದಿಕೆ ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.