Mangalore | ಸುರತ್ಕಲ್ ಟೋಲ್ ಗೇಟ್ ಕೇಂದ್ರಕ್ಕೆ ಮುತ್ತಿಗೆ
ಮಂಗಳೂರು : ಎನ್ ಐಟಿಕೆ ಟೋಲ್ ಗೇಟ್ ತೆರವು ಮಾಡಬೇಕೆಂದು ಆಗ್ರಹಿಸಿ ಟೋಲ್ ಗೇಟ್ ಗೆ ಪ್ರತಿಭಟನಾಕಾರರು ಏಕಾಏಕಿ ಮುತ್ತಿಗೆ ಹಾಕಿದ್ದಾರೆ.
ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾಕಾರರು – ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಟೋಲ್ ಸಂಗ್ರಹ ಕೇಂದ್ರದ ಗಾಜಿಗೆ ಹಾನಿಯಾಗಿದೆ.

ಈ ಘಟನೆಯಿಂದಾಗಿ ಸದ್ಯ ಟೋಲ್ ಸಂಗ್ರಹವನ್ನು ಬಂದ್ ಮಾಡಲಾಗಿದೆ.
ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಹೇಳಿದ್ದಾರೆ.
ಇನ್ನು ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಘೋಷಣೆಗಳನ್ನು ಕೂಡಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಜೆ.ಆರ್.ಲೋವೋ, ಐವನ್ ಡಿಸೋಜ ಸೇರಿದಂತೆ ಹಲವು ಭಾಗಿಯಾಗಿದ್ದರು.