ಮಂಗಳೂರು | ಮಹಿಳೆಗೆ ಕಿರುಕುಳ ನೀಡಿ ಹಣ ದೋಚಿದ್ದವ ಅಂದರ್

1 min read
Mangalore

ಮಂಗಳೂರು Mangalore | ಮಹಿಳೆಗೆ ಕಿರುಕುಳ ನೀಡಿ ಹಣ ದೋಚಿದ್ದವ ಅಂದರ್

ಮಂಗಳೂರು : ಸೆಲೂನ್ ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ.

Mangalore

ಕದ್ರಿ ಎಂಬಲ್ಲಿರುವ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್ ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್ 14 ಸಾವಿರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದ. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd