ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು – ಕೊಣಾಜೆ ವಿಶ್ವವಿದ್ಯಾನಿಲಯ ಕಂಟೋನ್ಮೆಂಟ್ ಝೋನ್
ಮಂಗಳೂರು ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ.
ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್-19 ಸಾಂಕ್ರಾಮಿಕವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ತರಗತಿಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರದಿಂದ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಕೊರೋನಾ ಸೋಂಕು ಕಾಣಿಸಲು ಪ್ರಾರಂಭಿಸಿದ್ದು, ಇದೀಗ ಆರಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ತರಗತಿಗಳನ್ನು ರದ್ದುಗೊಳಿಸಲಾಗಿದೆ.
ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ವಸತಿ ನಿಲಯ ಬಿಟ್ಟು ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
#covid19 #mangaloreuniversity #konaje
ಕಿತ್ತಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ಕಿತ್ತಳೆ ಹಣ್ಣಿನ ಕೆಲವು ಮನೆಮದ್ದುಗಳು https://t.co/n1HMwioq7j
— Saaksha TV (@SaakshaTv) March 20, 2021
ಮನೆಯಲ್ಲೇ ತಯಾರಿಸಿ ವೆನಿಲ್ಲಾ ಐಸ್ ಕ್ರೀಂ https://t.co/EcO1ByfVci
— Saaksha TV (@SaakshaTv) March 20, 2021
ಜೀವನೋಪಾಯಕ್ಕಾಗಿ ಹೂವು, ಪ್ರಸಾದ ಮಾರುತ್ತಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹೋದರಿ https://t.co/trMzK8sVSu
— Saaksha TV (@SaakshaTv) March 20, 2021
ಸ್ಯಾಂಡಲ್ ವುಡ್ ನ ಖಳ ಭಯಂಕರನ ಇಬ್ಬರು ಪುತ್ರರತ್ನಗಳ ಸಹೋದರರ ಸವಾಲ್!@TharunSudhir @Kannadacinema24@dasadarshan @SarjaFanshttps://t.co/WksW6tt3n8
— Saaksha TV (@SaakshaTv) March 16, 2021