ಹಾಸ್ಟೆಲ್ ಊಟ ಸೇವಿಸಿ 137 ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅಸ್ವಸ್ಥ…
ಮಂಗಳೂರಿನಲ್ಲಿ ಸೋಮವಾರ ರಾತ್ರಿ ನರ್ಸಿಂಗ್ ಕಾಲೇಜಿನಲ್ಲಿ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ 137 ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಂಗಳೂರು ಹೊರಹೊಲಯದ ಸಿಟಿ ಆಸ್ಪತ್ರೆಯನರ್ಸಿಂಗ್ ವಿದ್ಯಾರ್ಥಿಗಳು ರಾತ್ರಿ ಊಟ ಸೇವಿಸಿದ ಬಳಿಕ ಫುಡ್ ಪಾಯಿಸನ್ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳನ್ನ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆಸ್ಪತ್ರಗೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಟ್ಟೆನೋವು, ವಾಂತಿ, ಬೇಧಿಯಿಂದ ಬಳಲುತ್ತಿದ್ದ ವಿದ್ಯಾರ್ಥಿಗಳನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಹಾಸ್ಟೆಲ್ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.
Mangaluru : 137 students hospitalised after falling sick due to food poisoning in Mangaluru