mangaluru blast : ಮಂಗಳೂರು ಸ್ಪೋಟ ಗೃಹ ಇಲಾಖೆ ವೈಫಲ್ಯ ಎತ್ತಿ ತೋರಿಸಿದೆ – ಮಾಜಿ ಸಿಎಂ ಸಿದ್ದರಾಮಯ್ಯ
ಮಂಗಳೂರು ಆಟೋ ರಿಕ್ಷಾ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ “ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು.
ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
mangaluru blast – Former CM Siddaramaiah








