Mangaluru Blast : ಸ್ಪೋಟದ ಟಾರ್ಗೆಟ್ ಸಿ ಎಂ ಬೊಮ್ಮಾಯಿ ಆಗಿದ್ದರೇ ???
ಮಂಗಳೂರು ಸ್ಪೋಟಕ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಇದೊಂದು ಉಗ್ರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್ ಮತ್ತು ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಆದರೇ ಈ ಕೃತ್ಯದ ಟಾರ್ಗೆಟ್ ಸಿ ಎಂ ಬೊಮ್ಮಾಯಿ ಆಗಿದ್ದರೇ ಎಂಬ ಅನುಮಾನ ಈಗ ಮೂಡಿ ಬರುತ್ತಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಫೋಟ ಸಂಭವಿಸಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಶನಿವಾರ ಸ್ವಾತಂತ್ರ‍್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಆಗಮಿಸಿದ್ದರು.
ರಾಜ್ಯ ಮತ್ತು ಕೇಂದ್ರ ಗೃಹ ಇಲಾಖೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು. ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡ ಘಟನಾ ಸ್ಥಳಗ್ಗೆ ಆಗಮಿಸಲಿದೆ. ಇಂದು ಮಂಗಳೂರಿಗೆ ಎನ್‌ಐಎ ತಂಡವೂ ಆಗಮಿಸುವ ಸಾಧ್ಯತೆಯಿದೆ.








