ಚಿಕ್ಕಬಳ್ಳಾಪುರ: ಶಕ್ತಿ ಯೋಜನೆಯಿಂದಾಗಿ ಸದ್ಯ ಬಸ್ ಗಳು ಫುಲ್ ರಶ್ ಆಗುತ್ತಿವೆ. ಹೀಗಾಗಿ ಕೆಲವರು ಇದನ್ನೇ ಬಂಡವಾಳವಾಗಿ ಮಾಡಿಕೊಂಡು ಕಳ್ಳತನ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.
ಜನಸಂದಣಿಯ ಮಧ್ಯೆ ಮಹಿಳೆಯೊಬ್ಬಳು ಮಾಂಗಲ್ಯ ಸರ ಕಳ್ಳತನ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಅಲ್ಲದೇ, ಈ ಸಂದರ್ಭದಲ್ಲಿ ನಾನವಳಲ್ಲ ಎಂದು ರಂಪಾಟ ಮಾಡಿದ್ದಾಳೆ. ವಾರಾಂತ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಶಾ ಪೌಂಡೇಶನ್ಗೆ ಬಂದಿದ್ದರು. ಬಸ್ ಹತ್ತುವ ಸಂದರ್ಭದಲ್ಲಿ ನೂಕುನುಗ್ಗಲು ಆಗುವುದನ್ನೇ ಬಂಡವಾಳ ಮಾಡಿಕೊಂಡ ಮಹಿಳೆಯೊಬ್ಬಳು, 1.75 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದ್ದಾಳೆ. ಕೂಡಲೇ ಎಚ್ಚೆತ್ತ ಮಹಿಳೆ ಸರ ರಕ್ಷಿಸಿಕೊಂಡು ಕಳ್ಳಿಯ ಜುಟ್ಟು ಹಿಡಿದು ಎಳೆದೊಯ್ದು ಪೊಲೀಸರಿಗೆ ಒಪ್ಪಿಸಿದ್ದಾಳೆ. ಸದ್ಯ ನಗರ ಠಾಣಾ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.








