Manglore Bomb Blast : ಮಂಗಳೂರಿಗೆ ಭೇಟಿ ನೀಡಲಿರುವ ಆರಗ ಜ್ಞಾನೇಂದ್ರ
ಇಡೀ ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿರುವ ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ.. ಮಂಗಳೂರೊನ ಪ್ರಕರಣದಲ್ಲಿ ಬೆಂಗಳೂರಿಗೂ ಲಿಂಕ್ ಇರುವುದು ಗೊತ್ತಾಗಿದೆ..
ಬೆಂಗಳೂರು ಮೂಲಕ ರಹುಲ್ಲಾನನ್ನ ಬಂಧಿಸಲಾಗಿದೆ.. ಅಲ್ಲದೇ ಇವರ ಉದ್ದೇಶ ಭಾರತವನ್ನ ಇಸ್ಲಾಂ ರಾಷ್ಟ್ರ ಮಾಡುವುದು ಎಂಬ ಆಘಾತಕಾರಿ ವಿಚಾರವೂ ಗೊತ್ತಾಗಿದೆ..
ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು
ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ (NIA) ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ.