ವಿದ್ಯಾರ್ಥಿನಿಯರಿಗೆ ಚುಂಬನ ಪ್ರಕರಣ : 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಕೆಲ ವಿದ್ಯಾರ್ಥಿಗಳು ಬೆಟ್ಟಿಂಗ್ ಕಟ್ಟಿ ವಿದ್ಯಾರ್ಥಿನಿಯರಿಗೆ ಚುಂಬಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ..
ಈ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು ಪ್ರಕರಣ ಸಂಬಂಧ 8 ಮಂದಿ ವಿರುದ್ಧ ಪೋಕ್ಸೋ ಕೇಸ್ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಲಾಗಿದೆ.
8 ವಿದ್ಯಾರ್ಥಿಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾವುಟಗುಡ್ಡೆಯ ರೂಂನಲ್ಲಿ ವಿದ್ಯಾರ್ಥಿನಿಯರ ಜೊತೆ ಕಿಸ್ಸಿಂಗ್ ಪಂದ್ಯ ಮಾಡಿದ್ದ ವಿದ್ಯಾರ್ಥಿಗಳು, ಕಿಸ್ ನೀಡುವ ವೀಡಿಯೋವನ್ನೆಷ್ಟೇ ಅಲ್ಲದೇ ದೈಹಿಕ ಸಂಪರ್ಕದ ವಿಡಿಯೋಗಳು ಸಹ ಮಾಡಿರೋದಾಗಿ ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ..
ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದು, ಪಂದ್ಯ ಕಟ್ಟಿ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿಗಳು ಚುಂಬಿಸಿದ್ದರು. ವಿದ್ಯಾರ್ಥಿಗಳೆಲ್ಲಾ ಸೇರಿ ಟ್ರೂತ್ ಅಂಡ್ ಡೇರ್ ಗೇಮ್ ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಅಲ್ಲದೇ ತನಿಖೆ ವೇಳೆ ವಿದ್ಯಾರ್ಥಿಗಳಿಂದ ಮತ್ತಷ್ಟು ಅಶ್ಲೀಲ ವೀಡಿಯೋಗಳು ಲಭ್ಯವಾಗಿವೆ ಎನ್ನಲಾಗ್ತಿದೆ..








