ತೌಕ್ತೇ ಚಂಡಮಾರುತದ ಎಫೆಕ್ಟ್ – 50 ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂಕತರ – NDRF ತಂಡ ಆಗಮನ
ಮಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ ಕಾಟ … ಮತ್ತೊಂದೆಡೆ ಬ್ಲಾಕ್ ಫಂಗಸ್ ಆತಂಕ.. ಈ ನಡುವೆ ಚಮಡಮಾರುತದ ಭೀತಿಯಿಂದ ಜನ ತತ್ತರಿಸಿಹೋಗಿದ್ದಾರೆ. ತೌಕ್ತೇ ಚಂಡಮಾರುತ ಕರ್ನಾಟಕ ಕರಾವಳಿಗೆ ಅಪ್ಪಳಿಸಿದ್ದು, ಶುಕ್ರವಾರ ರಾತ್ರಿಯಿಂದಲೇ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗ್ತಿದೆ.. ಭಾರೀ ಮಳೆಯಿಂದ ಕರಾವಳಿ ಬಾಗದ ಜನ ಹೈರಾಣಾಗಿದ್ದಾರೆ.
ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ. ಹೀಗಾಗಿ 50ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಮಳೆ, ಪ್ರವಾಹ ಸಂಬಂಧಿತ ಅನಾಹುತ ತಡೆಗೆ ಜಿಲ್ಲೆಗೆ NDRF ತಂಡ ಆಗಮಿಸಿದೆ.
ಇಂದೂ ಸಹ ಮಳೆ ಮುಂದುವರೆದಿದೆ. ಬಿರುಗಾಳಿಯಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಸೋಮೇಶ್ವರ ಮತ್ತು ಉಲ್ಲಾಳದಲ್ಲಿ ಸಮುದ್ರಕ್ಕೆ ಸಮೀಪದಲ್ಲಿರುವ ಹಲವಾರು ಮನೆಗಳು ಹಾನಿಯಾಗಿವೆ ಎನ್ನಲಾಗಿದೆ.
ಮಂಗಳೂರು ತಾಲ್ಲೂಕಿನಲ್ಲಿ ಮಾತ್ರ ಜಿಲ್ಲಾಡಳಿತ 20ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ತೆರೆದಿದೆ. ಸೋಮೇಶ್ವರದಲ್ಲಿ 14 ಕುಟುಂಬಗಳನ್ನು ಮದರಸಾದಲ್ಲಿ ತೆರೆಯಲಾದ ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸಲಾಗಿದ್ದು, ಇನ್ನೂ 8 ಕುಟುಂಬಗಳನ್ನು ಉಲ್ಲಾಳದಲ್ಲಿರುವ ಸರ್ಕಾರಿ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇತರ ಕುಟುಂಬಗಳನ್ನು ಪಣಂಬುರು, ಮುಲ್ಕಿ ಮತ್ತು ಇತರ ಸ್ಥಳಗಳಿಂದ ಸ್ಥಳಾಂತರಿಸಲಾಗಿದೆ.
ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇನ್ನೂ ಹಲವು ದಿನ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.