Manglore
ಮಂಗಳೂರು : ಖೋಟಾ ನೋಟು ಚಲವಾವಣೆ ಮಾಡುತ್ತಿದ್ದ ಆರೋಪಿಗಳನ್ನ ಮಂಗಳೂರಿನಲ್ಲಿ ಬಂಧಿಸಲಾಗಿದೆ..
ಜನವರಿ 2 ರಂದು ಮಂಗಳೂರು ನಗರದ ನಂತೂರು ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.. ಮಂಗಳೂರು ಪೂರ್ವ ಠಾಣೆಯ ಪೊಲೀಸರು ಅವರನ್ನ ತಡೆದಿದ್ದಾರೆ..
ಪರಿಶೀಲಿಸಿ ಅವರ ವಶದಲ್ಲಿದ್ದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪತ್ತೆ ಹಚ್ಚಿ. ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.
ಖೋಟ ನೋಟುಗಳನ್ನು ಬೆಂಗಳೂರಿನಿಂದ ಡ್ಯಾನಿಯಲ್ ಎಂಬಾತನಿಂದ ಪಡೆದು, ಅವುಗಳನ್ನು ಮಂಗಳೂರು ನಗರದಲ್ಲಿ ನೋಟುಗಳನ್ನು ಚಲಾವಣೆ ಮಾಡುವ ಬಗ್ಗೆ, ಆರೋಪಿಗಳು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ ಸ್ಕೂಟರ್ ನಲ್ಲಿ ಅವುಗಳನ್ನು ಚಲಾವಣೆಗೆ ಕೊಂಡು ಹೋಗುತ್ತಿದ್ದ ಸಮಯ ಪೊಲೀಸರು ವಶಪಡಿಸಿಕೊಂಡಿರುತ್ತಾರೆ.
ನಿಜಾಮುದ್ದೀನ್ , ರಜೀಮ್ ಬಂಧಿತರಾಗಿದ್ದು , ಇವರಿಬ್ಬರ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ಅನೇಕ ಪ್ರಕರಣಗಳು ಈ ಹಿಂದೆ ದಾಖಲಾಗಿರುವುದು ಬೆಳಕಿಗೆ ಬಂದಿದೆ..